ಬೆಂಗಳೂರು: ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಅವರನ್ನು ಶುಕ್ರವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು 1.60 ಕೋಟಿ ರೂ. ಲಂಚ ಪಡೆಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಬಂಧನ ನಡೆದಿದೆ.

ಗಂಭೀರ ಆರೋಪದ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿತ್ತು. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಬಂಧನಕ್ಕೊಳಪಡಿಸಿದ್ದಾರೆ.

ಬಂಧನದ ಬೆನ್ನಲ್ಲೇ ಮೈಸೂರಿನ ಗೌರಿ ಶಂಕರ ನಗರದಲ್ಲಿರುವ ಸ್ನೇಹಮಯಿ ಕೃಷ್ಣ ಅವರ ನಿವಾಸದಲ್ಲೂ ಸಿಸಿಬಿ ಪೊಲೀಸರ ತಂಡ ಶೋಧ ನಡೆಸಿರುವ ಬಗ್ಗೆ ವರದಿಯಾಗಿದೆ.

ಮುಡಾ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮುಡಾದ ಈ ಹಿಂದಿನ ಆಯುಕ್ತ ಡಿ.ಬಿ.ನಟೇಶ್‌ ತಮ್ಮ ಪರಿಚಯಸ್ಥರ ಮೂಲಕ 9 ಕೋ.ರೂ. ಹಣ ಸಾಗಾಟ ಮಾಡಿದ್ದು, ಈ ಪೈಕಿ 1.60 ಕೋಟಿ ರೂ. ಅನ್ನುಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಲಂಚದ ರೂಪದಲ್ಲಿ ನೀಡಿ ಮುಂಭಡ್ತಿ ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!