ಪುತ್ತೂರು, ಫೆ.20: ಪುತ್ತೂರು ತಾಲೂಕಿನ ಹಾರಾಡಿ ಸಮೀಪದ ರೈಲ್ವೇ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಹಳಿಯ ಬಳಿಯಲ್ಲಿ ಮೃತದೇಹವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!