
ಸುಳ್ಯ; ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ಸುಳ್ಯ ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ನಡೆದಿದೆ
ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಸ್ವಿಫ್ಟ್ ಡಿಜೈರ್ ಕಾರು ಪಡೆದಿದ್ದರು. ಅದರಲ್ಲಿ ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುತ್ತಿದ್ದಾಗ, ಬೆಂಗಮಲೆ ಚಲುಪುತ್ತಿದ್ದಂತೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರು ನಜ್ಜುಗುಜ್ಜಾಗಿತ್ತು
ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಪರಿಣಾಮ ಸುಮಾರು ಅರ್ಧ ಗಂಟೆ ರಸ್ತೆತಡೆ ಉಂಟಾಯಿತು. ರಸ್ತೆಗೆ ಬಿದ್ದ ಮರವನ್ನು ಸಾರ್ವಜನಿಕರು ತೆರವು ಮಾಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.







