
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನ ಸಂಭ್ರಮವು ಮಂಗಳೂರಿನಲ್ಲಿ ಇಂದು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.
ಈ ಸಂದರ್ಭದಲ್ಲಿ ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಅವರು ಡಾ. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿ, ಶುಭಾಶಯಗಳನ್ನು ತಿಳಿಸಿದರು. ಸಹಕಾರಿ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆಯನ್ನು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ. ಜಯರಾಮ ರೈ ಉಪಸ್ಥಿತರಿದ್ದರು







