
ಪುತ್ತೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ‘ಸಹಕಾರಿ ರತ್ನ’, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ ಪುತ್ತೂರು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.
ಫೆ. 24ರಂದು ಬೆಳಗ್ಗೆ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರೂ ಆಗಿರುವ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಸಂಘದ ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಅವರು ಪುಷ್ಪಗುಚ್ಛ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಭಿನಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಗೊಟ್ಟು ಹಾಗೂ ಲೋಕೇಶ್ ಪಡ್ಡಾಯೂರು ಉಪಸ್ಥಿತರಿದ್ದರು.







