
ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆಗೊಳಗಾದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ.
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪದ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದರು.ಹಲವು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಬಳಿಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಗಮನಿಸಿ ಮನೆಯವರು ಆಕೆಯನ್ನು ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚೇತರಿಕೆಗೊಂಡ ಬಳಿಕ ಮನೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.







