ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿದೇಶದಿಂದ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.
ವಿಟ್ಲ ಪೊಲೀಸ್ ಠಾಣೆಯ ಅಕ್ರ ಸಂ. 193/2019ರಡಿ ಐಪಿಸಿ ಕಲಂ 427, 504, 394, 341 ಹಾಗೂ ಸಾರ್ವಜನಿಕ ಆಸ್ತಿನಷ್ಟ ತಡೆ ಕಾಯ್ದೆಯ 2(ಎ) ವಿಧಿಯಡಿ ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಸುಮಾರು ಎರಡು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು.
ದಿನಾಂಕ 24-02-2026ರಂದು ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ವಿಟ್ಲ ಠಾಣೆಯ ಹೆಡ್ ಕಾನ್ಸ್ಟೇಬಲ್ (HC 668) ಮತ್ತು ಪೊಲೀಸ್ ಕಾನ್ಸ್ಟೇಬಲ್ (PC 2465) ಆರೋಪಿಯನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿದರು.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಧೀಶರು ಮಾರ್ಚ್ 7, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!