
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026, ಕಲಂ 309(4) ಭಾರತೀಯ ನ್ಯಾಯ ಸಂಹಿತೆಯಡಿ ದಾಖಲಾಗಿರುವ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಿತ ಆರೋಪಿತನ ಮುಖಚಹರೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದರಿ ವ್ಯಕ್ತಿಯ ಗುರುತು ಅಥವಾ ಇರುವಿಕೆ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ತಕ್ಷಣ ಜಿಲ್ಲಾ ಕಂಟ್ರೋಲ್ ರೂಂ (ದೂರವಾಣಿ: 0824 2220500, 9480805300) ಅಥವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ (08255-235000, 9480805368) ಸಂಖ್ಯೆಗೆ ಸಂಪರ್ಕಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.







