ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದೆ.

ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಕಲಬುರಗಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಮುಂದುವರಿಯಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲು ಒಣ ಹವೆ ಇರಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!