ಇರಾನ್ (Iran) ಮತ್ತು ಇಸ್ರೇಲ್ (Israel)-ಅಮೆರಿಕ (America) ನಡುವೆ ಯುದ್ಧದ ಜ್ವಾಲೆ ಹೊತ್ತಿಕೊಂಡಿರುವ ಬೆನ್ನಲ್ಲೇ, ಇಡೀ ಜಗತ್ತಿನ ಚಿತ್ತ ಭಾರತದ ನಿಲುವಿನತ್ತ ನೆಟ್ಟಿದೆ. ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಈ ಭೀಕರ ಉದ್ವಿಗ್ನತೆಯ ಕುರಿತು ಭಾರತ ಸರ್ಕಾರ (Government of India) ತನ್ನ ಮೊದಲ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಹಾಗಾಗಿ, ಸಂಘರ್ಷದ ಕುರಿತು ಭಾರತ ಹೇಳಿದ್ದೇನು ಗೊತ್ತಾ?

ಮಧ್ಯಪ್ರಾಚ್ಯದ ರಾಷ್ಟ್ರಗಳಾದ ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವಿನ ಸೇನಾ ಸಂಘರ್ಷದ ಕುರಿತು ಭಾರತ ಸರ್ಕಾರವು ತನ್ನ ಮೊದಲ ಅಧಿಕೃತ ಪ್ರತಿಕ್ರಿಯೆಯನ್ನು ಬಿಡುಗಡೆ ಮಾಡಿದೆ. ಅದರಂತೆ, ಈ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಶಾಂತಿ ಕಾಪಾಡುವಂತೆ ಎಲ್ಲಾ ರಾಷ್ಟ್ರಗಳಿಗೆ ಮನವಿ ಮಾಡಿದೆ. ಇದರೊಂದಿಗೆ ಸಂಘರ್ಷದ ಹಾದಿಗಿಂತ ರಾಜತಾಂತ್ರಿಕ ಮಾತುಕತೆಗಳ ಮೂಲಕವೇ ಸಮಸ್ಯೆ ಬಗೆಹರಿಯಬೇಕು ಎಂದು ಭಾರತ ಸರ್ಕಾರ ತಿಳಿಸಿದೆ.

ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ಏನಿದೆ?

ನವದೆಹಲಿಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಎರಡು ಕಡೆಯವರು ಕೂಡಲೇ ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಿ ಸಂಯಮ ಕಾಯ್ದುಕೊಳ್ಳುವಂತೆ ಕೋರಲಾಗಿದೆ. ಜೊತೆಗೆ ಯುದ್ಧದ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ಅಂತರಾಷ್ಟ್ರೀಯ ವಿವಾದಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯಿಂದ ಮಾತ್ರ ಪರಿಹರಿಸಲು ಸಾಧ್ಯ ಎಂದು ಭಾರತ ಪ್ರತಿಪಾದಿಸಿದೆ. ಅಲ್ಲದೆ, ಪ್ರತಿಯೊಂದು ರಾಷ್ಟ್ರದ ಸಾರ್ವಭೌಮತ್ವವನ್ನು ಗೌರವಿಸುವುದು ಶಾಂತಿ ಸ್ಥಾಪನೆಗೆ ಅತಿ ಮುಖ್ಯ ಎಂದು ಎಚ್ಚರಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!