
ಮುಂಬೈ :ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಇಂಗ್ಲೆಂಡ್ ವಿರುದ್ಧ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ 4ನೇ ಬಾರಿಗೆ ಚುಟುಕು ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಅಲ್ಲದೆ ಟಿ20 ವಿಶ್ವಕಪ್ನಲ್ಲಿ ಸತತ 2ನೇ ಬಾರಿಗೆ ಫೈನಲ್ ಪ್ರವೇಶಿಸಿ ಹೊಸ ದಾಖಲೆ ಬರೆಯಿತು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 253 ರನ್ಗಳಿಸಿದರೆ, ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 246 ರನ್ಗಳಿಸಿತು. ಜಾಕೋಬ್ ಬೆಥೆಲ್ 105 ರನ್ಗಳಿಸಿ ನಡೆಸಿದ ಹೋರಾಟ ಆಂಗ್ಲರಿಗೆ ಫಲನೀಡಲಿಲ್ಲ.
254 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್(5) ಹಾಗೂ ನಾಯಕ ಬ್ರೂಕ್(7) ವಿಕೆಟ್ ಒಪ್ಪಿಸಿದರು.









