
ಪುತ್ತೂರು: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಜನ ಸಾಮಾನ್ಯರ ಹಿತವನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
300 ಹಾಸಿಗೆಗಳ ಪುತ್ತೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಡಲಾಗಿದ್ದು, 5 ಕಿಲೋ ಅಕ್ಕಿಯೊಂದಿಗೆ ‘ಇಂದಿರಾ ಕಿಟ್’ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಥಮ ಬಾರಿಗೆ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ತಿಳಿಸಲಾಗಿದೆ ಎಂದರು.
ಕೊಲ್ಲೂರು ಹಾಗೂ ಸುಬ್ರಹ್ಮಣ್ಯ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಎಲ್ಲ ಸಮುದಾಯ ಮತ್ತು ವರ್ಗಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಜೆಟ್ ಮಂಡಿಸಿದ್ದಾರೆ. ಯಾರು ಏನೇ ಹೇಳಲಿ, ಇದು ಜನ ಸಾಮಾನ್ಯರ ಬಜೆಟ್ ಎಂದು ಅಶೋಕ್ ರೈ ಹೇಳಿದರು.









