ಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ವಾರ್ಡನ್‌ ಸೇರಿ ಹಲವರಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮೃತ ಬಾಲಕನ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ. ಡ್ರಗ್ ಅಡಿಕ್ಟ್ ಆಗಿ ಕೊಲೆ ಮಾಡಿರಬಹುದು ಎಂದು ಮೃತ ಬಾಲಕನ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ರಾಡ್‌ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳುತ್ತಿದೆ. ಆದರೆ, ಚಾಕುವಿನಿಂದ ಚುಚ್ಚಿರುವ ಅನುಮಾನ ಇದೆ. ಇಷ್ಟೊಂದು ಭಯಾನಕವಾಗಿ ಅಷ್ಟೂ ಜನರ ಮೇಲೆ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಆರೋಪಿ ಬಾಲಕ ಡ್ರಗ್ ಅಡಿಕ್ಟ್ ಆಗಿರಬಹುದು ಎಂದು ಆರೋಪ ಮಾಡಿದ್ದಾರೆ. ಬಳ್ಳಾರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!