ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೇವಾ ರೂಪದಲ್ಲಿ ಉಚಿತವಾಗಿ ನೀಡಲು ಇಚ್ಛಿಸುವ ತಂಡಗಳು ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏಪ್ರಿಲ್ 10ರಿಂದ 20ರವರೆಗೆ ನಡೆಯುವ ಶ್ರೀ ದೇವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸೇವಾ ಮನೋಭಾವದಿಂದ ಕಾರ್ಯಕ್ರಮಗಳನ್ನು ನೀಡಲು ಆಸಕ್ತರು ಮಾರ್ಚ್ 20ರೊಳಗಾಗಿ ದೇವಸ್ಥಾನದ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿಯಲ್ಲಿ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕಾರ್ಯಕ್ರಮದ ವಿವರ ಹಾಗೂ ತಂಡದಲ್ಲಿ ಭಾಗವಹಿಸುವ ಸದಸ್ಯರ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ತಂಡಗಳು ನೀಡುವ ಕಾರ್ಯಕ್ರಮಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಪಾಶ್ಚಾತ್ಯ ಶೈಲಿಯ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಸ್ವೀಕೃತಗೊಂಡ ಅರ್ಜಿಗಳನ್ನು ಆಡಳಿತ ಮಂಡಳಿ ಪರಿಶೀಲಿಸಿ, ಅರ್ಹ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448732414ನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

Join WhatsApp Group
error: Content is protected !!