ಬಂಟ್ವಾಳ: ಬಸ್‌ನಲ್ಲಿ ಬ್ಯಾಗ್ ಒಳಗಡೆ ಇಡಲಾಗಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಅಂತರ್‌ರಾಜ್ಯ ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ನವೆಂಬರ್‌ 19, 2025ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 132/2025, ಕಲಂ 303(2) ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ವೇಳೆ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ನಿವಾಸಿ ಸಮದ್ ಖಾನ್ (37) ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಯಿಂದ ಕಳ್ಳತನ ಮಾಡಲಾಗಿದ್ದ 174 ಗ್ರಾಂ ತೂಕದ ಅಂದಾಜು ₹20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!