
ಉಪ್ಪಿನಂಗಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಕಾರು-ಆಟೋ ಮುಖಾಮುಖಿ ಡಿಕ್ಕಿಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಾರ್ಚ್ 9ರಂದು ಸಂಜೆ, KA-21-MA-0759 ನೋಂದಣಿ ಸಂಖ್ಯೆಯ ಕಾರನ್ನು ಸುಧನ್ವ ಎಂಬವರು ಉಪ್ಪಿನಂಗಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು. ಇಂದ್ರಪ್ರಸ್ಥ ಶಾಲೆ ಸಮೀಪ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ, ಎದುರಿನಿಂದ ಶಾಲಾ ಮಕ್ಕಳನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದ KA-21-C-1416 ಸಂಖ್ಯೆಯ ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಆಟೋ ರಿಕ್ಷಾ ಪಲ್ಟಿಯಾಗಿ ರಸ್ತೆ ಮೇಲೆ ಬಿದ್ದಿದೆ. ಆಟೋದಲ್ಲಿದ್ದ ಮೂವರು ಮಕ್ಕಳಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ನೀಡಲಾಗಿದೆ. ಇನ್ನಿಬ್ಬರು ಮಕ್ಕಳು ಹಾಗೂ ಆಟೋ ಚಾಲಕ ಖಲಂದರ್ ಶಾಫಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅಕ್ರ.40/2026 ಕಲಂ 281, 125(ಎ) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.









