ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದೆ.

ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗುವ ಮೊದಲೇ ಅಜ್ಞಾತ ಸ್ಥಳದಿಂದಲೇ, ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಏಕಾಏಕಿ ಹೈಕೋರ್ಟ್ನಿಂದ ಅರ್ಜಿ ವಾಪಸ್ ಪಡೆದುಕೊಂಡು ಬಳಿಕ ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನ ಭೀತಿ ಎದುರಿಸುತ್ತಿರುವ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!