
ಪುತ್ತೂರು, ಮಾ.11: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ಫಿಲೋ ಮಿಲನ – 2026’ ಕಾರ್ಯಕ್ರಮವು ಮಾರ್ಚ್ 14ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ರೈ ಜಿ ಹಾಗೂ ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಪಡೀಲ್‌ನ ಪಾಲುದಾರರಾದ ಪ್ರಶಾಂತ್ ಶೆಣೈ ಭಾಗವಹಿಸಲಿದ್ದಾರೆ.
ಗೌರವ ಅತಿಥಿಯಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಶನ್ ಲಸ್ರಾದೋ ಉಪಸ್ಥಿತರಿರುವರು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.









