ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರ್ ಜಂಕ್ಷನ್‌ನಲ್ಲಿ ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಮಾರ್ಚ್ 12ರಂದು ಸಂಜೆ ನಡೆದಿದೆ.
ಬಂಟ್ವಾಳ ನಿವಾಸಿ ರವಿ ಬಿ (27) ಅವರ ದೂರಿನಂತೆ, ಅವರು ಕಾರ್ತಿಕ್ ಎಂಬವರ ಕೆಎಲ್ 14 ಎಕ್ಸ್ 1092 ನೋಂದಣಿಯ ಮೋಟಾರ್ ಸೈಕಲ್‌ನಲ್ಲಿ ಸಹ ಸವಾರನಾಗಿ ಪ್ರಯಾಣಿಸುತ್ತಿದ್ದಾಗ, ಹಿಂದಿನಿಂದ ಬಂದ KA 04 ML 4745 ನೋಂದಣಿಯ ಕಾರು ತೀರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ಪರಿಣಾಮ ರವಿ ಹಾಗೂ ಬೈಕ್ ಸವಾರ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟು ರಕ್ತಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಅಪಘಾತದ ನಂತರ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ KA 21 U 6042, KA 21 J 3998, KA 19 EP 9907 ಹಾಗೂ KA 21 EE 3526 ನೋಂದಣಿಯ ಮೋಟಾರ್ ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ಅವುಗಳಿಗೆ ಹಾನಿ ಉಂಟುಮಾಡಿದೆ.
ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2026ರಂತೆ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 281, 125(ಎ) ಹಾಗೂ ಐಎಂವಿ ಕಾಯ್ದೆಯ ಕಲಂ 134(ಎ&ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!