ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆದಿರುವುದನ್ನು ವಿಶ್ವ ಹಿಂದೂ ಪರಿಷತ್ (ವಿ.ಹಿಂ.ಪ.) ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಸ್ಥಾನಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೀಸಲಾದ ಪವಿತ್ರ ಕ್ಷೇತ್ರಗಳಾಗಿದ್ದು, ಇಂತಹ ಸ್ಥಳಗಳನ್ನು ರಾಜಕೀಯ ವೇದಿಕೆಯಾಗಿ ಬಳಸುವುದು ದೇವಾಲಯದ ಪರಂಪರೆ ಮತ್ತು ಭಕ್ತರ ಭಾವನೆಗಳಿಗೆ ಧಕ್ಕೆ ತರುವಂತದ್ದು ಎಂದು ತಿಳಿಸಿದ್ದಾರೆ.
ಶತಮಾನಗಳ ಇತಿಹಾಸ ಹೊಂದಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಸಾವಿರಾರು ಭಕ್ತರು ನಂಬಿಕೆ ಇಟ್ಟು ಭೇಟಿ ನೀಡುವ ಈ ಪವಿತ್ರ ಸ್ಥಳದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮಗಳನ್ನು ಆಯೋಜಿಸುವುದು ದೇವಾಲಯದ ಪಾವಿತ್ರ್ಯಕ್ಕೆ ಪ್ರಶ್ನಾರ್ಥಕವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇವಾಲಯದ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಮಾಜೋಪಯೋಗಿ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು. ಮುಂದಿನ ದಿನಗಳಲ್ಲಿ ಇಂತಹ ರಾಜಕೀಯ ಕಾರ್ಯಕ್ರಮಗಳನ್ನು ದೇವಸ್ಥಾನದ ವೇದಿಕೆಯಲ್ಲಿ ನಡೆಸದಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ದೇವಾಲಯದ ಪಾವಿತ್ರ್ಯವನ್ನು ಕಾಪಾಡುವ ಹೊಣೆಗಾರಿಕೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸಾರ್ವಜನಿಕರ ಮೇಲಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರೇಮಲತಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!