ಉಪ್ಪಿನಂಗಡಿ: ಶಿರಾಡಿ ಘಾಟ್ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ.
ದಿನಾಂಕ 13-03-2026 ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಹಾಸನದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕೆ.ಎ 21 ಎನ್‌ 5873 ಸಂಖ್ಯೆಯ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಕೆಎಸ್‌ಆರ್‌ಟಿಸಿ ಬಸ್ (ಕೆ.ಎ 21 ಎಫ್‌ 0239) ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದ್ರಶೇಖರ (57) ಶಿಶಿಲ, ಜನಾರ್ದನ ಗೌಡ (58) ಉಜಿರೆ ಹಾಗೂ ಶ್ರೀಧರ ಗೌಡ (61) ಮರಕಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸುರೇಶ್ (58) ಉಜಿರೆ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!