ಶಿವಮೊಗ್ಗ: ಸ್ಕೂಟರ್ ಹಾಗೂ ವಾಟರ್ ಟ್ಯಾಂಕ‌ರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರ್ಕಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ.

ಕಾರ್ಕಳ ತಾಲೂಕಿನ ಬೋಳ ಗ್ರಾಮದ ಸತೀಶ್-ಸುನೀತಾ ದಂಪತಿಯ ಪುತ್ರಿ ಲಾವಣ್ಯ (25) ಮೃತ ಮೆಡಿಕಲ್‌ ಪಿಜಿ ವಿದ್ಯಾರ್ಥಿನಿ..ಘಟನೆಯ ಸಂದರ್ಭ ಲಾವಣ್ಯ ಹಾಗೂ ಮತ್ತೊಬ್ಬ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಆಸ್ಪತ್ರೆ ಆವರಣದ ಮೂಲಕ ತೆರಳುತ್ತಿದ್ದ ವೇಳೆ, ಕಟ್ಟಡ ಕಾಮಗಾರಿಗೆ ನೀರು ಪೂರೈಸುತ್ತಿದ್ದ ವಾಟರ್ ಟ್ಯಾಂಕ‌ರ್ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಸ್ಕೂಟರ್ ಕೆಳಗೆ ಬಿದ್ದ ಲಾವಣ್ಯ ಟ್ಯಾಂಕರ್ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಕೂಟರ್‌ನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಓವೇರಿಯಾ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!