
ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಮೃತ ಯುವಕ.
ಗೌತಮ್ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅವಿವಾಹಿತರಾಗಿದ್ದ ಗೌತಮ್ ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದರು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿಕೊಟ್ಟು ತನಿಖೆ ನಡೆಸುತ್ತಿದ್ದಾರೆ.









