ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಹೊರ ಜಿಲ್ಲೆಯ ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಲಾಲ್‌ಬಾಗ್ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 35 ವರ್ಷದ ಮಹಿಳೆ ಉರ್ವ ಸ್ಟೋರ್ ಜಂಕ್ಷನ್ ಬಳಿ ಕೂಲಿ ಕೆಲಸಕ್ಕಾಗಿ ನಿಂತಿದ್ದ ವೇಳೆ ಆರೋಪಿ ಆಕೆಯನ್ನು ಸಂಪರ್ಕಿಸಿ ಕೆಲಸ ಇದೆ ಎಂದು ನಂಬಿಸಿದ್ದಾನೆ. ಬಳಿಕ ಬಸ್ಸಿನಲ್ಲಿ ಲಾಲ್‌ಬಾಗ್ ಕಡೆಗೆ ಕರೆದುಕೊಂಡು ಹೋಗಿದ್ದಾನೆ.
ಅಲ್ಲಿಂದ ಪಂಪ್ ಹೌಸ್ ಸಮೀಪದ ಜನವಾಸವಿಲ್ಲದ ಹಳೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಹಿಳೆ ಜೋರಾಗಿ ಬೊಬ್ಬೆ ಹಾಕುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಈ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಮಹಿಳೆಯ ಕೈಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಪರಾರಿಯಾದ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!