ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12ರಂದು ನಡೆದ ಅಪಘಾತ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2026 ರಂತೆ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 281, 125(ಎ) ಹಾಗೂ ಐಎಂವಿ ಕಾಯ್ದೆಯ ಕಲಂ 134(ಎ & ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ವೇಳೆ ಕಾರು ಚಲಾಯಿಸಿದ್ದವರು ಅಪ್ರಾಪ್ತನಾಗಿರುವುದು ದೃಢಪಟ್ಟಿದೆ. ವಾಹನದ ಮಾಲಕಿ ಹಾಗೂ ಅಪ್ರಾಪ್ತ ಬಾಲಕನ ತಾಯಿ ಪುತ್ತೂರು ನಿವಾಸಿ ಕೆ.ಎ. ಮಮತಾಜ್ (42) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!