
ಸುಳ್ಯ: ಸಂಚಾರ ನಿಯಮಗಳನ್ನು ಮರುಮರು ಉಲ್ಲಂಘಿಸುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಐಎಂವಿ ಕಾಯ್ದೆ ಕಲಂ 119 ರ್/ವ್ 177, 184, 194(ಸಿ) ಅಡಿಯಲ್ಲಿ ಮೂರು ಪ್ರತ್ಯೇಕ ಲಘು ಪ್ರಕರಣಗಳು ದಾಖಲಾಗಿದ್ದವು.
ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ತನಿಖೆ ಪೂರ್ಣಗೊಳಿಸಿ ಮಾನ್ಯ ಎಸ್‌ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ, ಸುಳ್ಯ ಅವರಿಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸಿ.ಸಿ. 42/26, 43/26 ಹಾಗೂ 44/26 ಸಂಖ್ಯೆಗಳಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು ₹3,000 ದಂಡ ವಿಧಿಸಿದೆ.
ಇದಲ್ಲದೆ, ಮೂರು ಪ್ರಕರಣಗಳಿಗೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ (ಮಾರ್ಚ್ 15ರಿಂದ 29ರವರೆಗೆ) ಸಮುದಾಯ ಸೇವೆ ನಿರ್ವಹಿಸುವಂತೆ ಆದೇಶಿಸಿದೆ. ಈ ಅವಧಿಯಲ್ಲಿ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳಿಗೆ ಸಂಬಂಧಿಸಿದ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಅದೇ ವೇಳೆ, ಆರೋಪಿತನ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸಲು ನ್ಯಾಯಾಲಯ ಆದೇಶಿಸಿದೆ.









