ಬಂಟ್ವಾಳ: ಕಳವು ಪ್ರಕರಣದಲ್ಲಿ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ.166/2017, ಕಲಂ 379 r/w 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮലപ്പുറം ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತ ನ್ಯಾಯಾಲಯದಿಂದ ಜಾರಿಯಾದ ವಾರೆಂಟ್ ತಪ್ಪಿಸಿಕೊಂಡು ವಾಸವಾಗಿದ್ದನು.
ಮಾಹಿತಿ ಆಧರಿಸಿ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ ಕೆ. ನೇತೃತ್ವದ ತಂಡವು ಹೆಡ್‌ಕಾನ್ಸ್‌ಟೆಬಲ್ 314 ಸಂತೋಷ್ ಹಾಗೂ ಪಿಸಿ 2462 ಶಿವಾನಂದ ಮಡ್ಡಿ ಅವರೊಂದಿಗೆ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!