ಮಂಗಳೂರು: ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ 9 ವರ್ಷದ ಬಾಲಕನನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 18, 2026 ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ (POCSO) ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತನನ್ನು ಆಶೀಶ್ ಪೂಜಾರಿ (33), ತಂ: ಮಂಜುನಾಥ್, ವಾಸ: ಮಡ್ಯಾರ್, ಕೋಟೆಕಾರು ಪೋಸ್ಟ್, ಉದ್ಯೋಗ: ಎಂಎಸ್‌ಸಿ ಲಾಜಿಸ್ಟಿಕ್ಸ್, ಬಿಜೈ ಎಂದು ಗುರುತಿಸಲಾಗಿದೆ.
ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.














