ಮೂಡುಬಿದರೆ, ಮಾ.18: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಜಾತ್ರೆ ಮುಗಿದ ಬಳಿಕ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಬಳಿಕ ರಾಜೇಂದ್ರ ಪೂಜಾರಿ ಮತ್ತು ರಾಜೇಶ್ ಬಲ್ಲಾಳ್ ನೇತೃತ್ವದಲ್ಲಿ ಕೆಲವರು ಕೋಳಿಗಳಿಗೆ ಹರಿತವಾದ ಬಾಳ್‌ಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಿಸಿ ಹಣ ಪಣವಾಗಿಟ್ಟು ಅಕ್ರಮ ಕೋಳಿ ಅಂಕ ನಡೆಸುತ್ತಿದ್ದರೆಂದು ಪೊಲೀಸರು ಮಾಹಿತಿ ಪಡೆದು ದಾಳಿ ನಡೆಸಿದರು.
ದಾಳಿಯಲ್ಲಿ 6 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪಣಕ್ಕಿಟ್ಟಿದ್ದ ₹1,480 ನಗದು, 17 ಜೀವಂತ ಹುಂಜಗಳು ಹಾಗೂ ಕೋಳಿ ಅಂಕಕ್ಕೆ ಬಳಸುವ ಎರಡು ಬಾಳ್‌ಗಳನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಆರೋಪಿಗಳ ವಿರುದ್ಧ ಮೂಡುಬಿದರೆ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.30/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಕಲಂ 189(2), 193, 190 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 87, 93 ಮತ್ತು ಪ್ರಾಣಿ ಹಿಂಸೆ ಪ್ರತಿಬಂಧಕ ಕಾಯ್ದೆ 1960ರ ಕಲಂ 11(1)(ಟಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!