ಕಡಬ: ತಲೆನೋವಿನ ಕಾರಣದಿಂದ ಮನೆಯಲ್ಲಿ ಇದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕನು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಈ ಸಂಬಂಧ ಬಾಲಕನ ತಂದೆ ಸಂಜೀವ ಪೂಜಾರಿ (50) ಅವರು ನೀಡಿದ ದೂರಿನಂತೆ, ಮಗನಿಗೆ ಪದೇಪದೇ ತಲೆನೋವು ಕಾಣಿಸಿಕೊಂಡು ಬರುತ್ತಿತ್ತು. ಮಾರ್ಚ್ 18ರಂದು ಸಂಜೆ ತಲೆನೋವು ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದಾನೆ. ಬಳಿಕ ಬಾಲಕನು ಅಸ್ವಸ್ಥಗೊಂಡು ಮನೆಯಲ್ಲೇ ಹೊರಳಾಡುತ್ತಿರುವುದಾಗಿ ತಾಯಿ ತಿಳಿಸಿದ್ದರಿಂದ, ಸಂಜೀವ ಪೂಜಾರಿ ಅವರು ತಕ್ಷಣ ಮನೆಗೆ ಬಂದು ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಪರೀಕ್ಷಿಸಿದಾಗ ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ. 10/2026, ಕಲಂ 194 BNSS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!