ಮಂಗಳೂರು, ಮಾ.19: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಉಂಟುಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.
2025ರಲ್ಲಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಷಯಗಳನ್ನು ಹಂಚಿಕೊಂಡ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್.ಎಸ್.)–2023ರ ಕಲಂ 353(1), 353(2), 61(2) ಹಾಗೂ 55ರಡಿ ಪ್ರಕರಣ ದಾಖಲಾಗಿತ್ತು.
ತನಿಖೆಯಲ್ಲಿ, ‘Terrorism has religion and so called Terrorists too. Its Islam’ ಎಂಬುದನ್ನು ಸೇರಿದಂತೆ ಕೆಲವು ವಿವಾದಾತ್ಮಕ ಪೋಸ್ಟ್‌ಗಳನ್ನು ಆರೋಪಿತೆ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾ.19ರಂದು ಆರೋಪಿತೆಯನ್ನು ವಶಕ್ಕೆ ಪಡೆದು, ಸಂಬಂಧಿತ ಮೊಬೈಲ್ ಫೋನ್ ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಮಾಹಿತಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.














