ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಪ್ರದೇಶದಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಸೊತ್ತಿಗೆ ಹಾನಿ ಮಾಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಪ್ರಕರಣದ ಫಿರ್ಯಾದುದಾರ ಕುನಲ್ ಭುಹ್ನಿಯಾ (27) ಅವರು ಗ್ಯಾಸ್ ಪಂಪ್‌ನಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ದೂರಿನಂತೆ, ಮಾರ್ಚ್ 20ರಂದು ಸಂಜೆ ಕೆಎ–19 ಎಸಿ 2102 ನೋಂದಣಿ ಸಂಖ್ಯೆಯ ಆಟೋರಿಕ್ಷಾವನ್ನು ಚಲಾಯಿಸಿಕೊಂಡು ಬಂದ ಸಜಿಪಮೂಡಾ ನಿವಾಸಿ ಅಫ್ರೀಝ್ (28) ಗ್ಯಾಸ್ ಪಂಪ್ ಆವರಣಕ್ಕೆ ಪ್ರವೇಶಿಸಿ ಕಚೇರಿ ಸಿಬ್ಬಂದಿ ಅಶ್ವಿನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ.
ನಂತರ ಹೊರಗೆ ಬಂದು ಪಂಪ್‌ಗೆ ಸೇರಿದ ಸೊತ್ತುಗಳಿಗೆ ಹಾನಿ ಮಾಡಿದ್ದು, ಸುಮಾರು ₹48,000 ಮೌಲ್ಯದ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 36/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 115(2), 287, 324(4), 351(2) ಹಾಗೂ 352ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!