ವಿಟ್ಲ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲದ ಒಕ್ಕೆತ್ತೂರು ತಿರುವಿನ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬಜಾಜ್ ಪಲ್ಸರ್ (ಕೆಎ-19 ಎಚ್‌ಬಿ 5744) ಬೈಕ್‌ನಲ್ಲಿ ವಿಟ್ಲದ ಕಡೆಗೆ ಬರುತ್ತಿದ್ದ ವೀರಕಂಬ ಮೂಲದ ಇಬ್ಬರು ಸವಾರರಿಗೆ, ವಿಟ್ಲದಿಂದ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರು (ಕೆಎ-30 9810) ಒಕ್ಕೆತ್ತೂರು ಒಟ್ಟೆಶಾಂತಿ ಅಪಾಯಕಾರಿ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಸಾರಿಗೆ ನಿಯಮಕ್ಕೆ ವಿರುದ್ಧವಾಗಿ ರಸ್ತೆ ತಿರುವಿನಲ್ಲಿ ಮಿತಿ ಮೀರಿದ ವೇಗದಲ್ಲಿ ಬಲಬದಿಯಲ್ಲಿ ಸಂಚರಿಸಿದ್ದ ಕಾರು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಡಿಕ್ಕಿಯ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳು ವೀರಕಂಬ ಪರಿಸರದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ತನಿಖೆ ಬಳಿಕ ಲಭ್ಯವಾಗಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!