ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎನ್ನು ಮಂಗಳೂರು ನಗರಕ್ಕೆ ತಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026ರಂದು ಪಂಪವೆಲ್–ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದವರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಲಾಗಿದೆ.
ಬಂಧಿತರು:
ಹೈದರ್ @ ಹೈದರ್ ಆಲಿ (53), ಪೆರ್ಮನೂರು ಪೋಸ್ಟ್, ತೊಕ್ಕೊಟ್ಟು, ಮಂಗಳೂರು.
ಮೊಹಮ್ಮದ್ ಸಜಾದ್ (29), ಚೆಂಬುಗುಡ್ಡೆ ಜುಮ್ಮಾ ಮಸೀದಿ ಎದುರುಗಡೆ, ಪೆರ್ಮನೂರು ಪೋಸ್ಟ್, ತೊಕ್ಕೊಟ್ಟು.
ಜೈಸನ್ ಮೆನೆಜಸ್ (26), ಮೂಲತಃ ಶಿರ್ವ, ಕಾಪು ತಾಲೂಕು, ಉಡುಪಿ ಜಿಲ್ಲೆ; ಹಾಲಿ ವಾಸ ಉಜ್ಜೋಡಿ, ಪಂಪವೆಲ್, ಮಂಗಳೂರು.
ಬಂಧಿತರಿಂದ ರೂ.2,50,000 ಮೌಲ್ಯದ 26 ಗ್ರಾಂ ಎಂಡಿಎಂಎ, ರೂ.37,000 ನಗದು, 5 ಮೊಬೈಲ್ ಫೋನ್‌ಗಳು, ತೂಕಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಹೈದರ್ ವಿರುದ್ಧ ಮಂಗಳೂರು ಪೂರ್ವ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಹಾಗೂ 2024ರಲ್ಲಿ ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಉಳ್ಳಾಲ ಠಾಣೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣವೂ ದಾಖಲಾಗಿದೆ.
ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗೆ ಕ್ರಮ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!