ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 22, 2026ರ ಸಂಜೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರ್ವೇಲು ಪ್ರದೇಶದಲ್ಲಿ ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ವಿಚಾರಣೆ ನಡೆಸಿದಾಗ, ಆತನು ಕೇರಳದ ಕಾಸರಗೋಡು ನಿವಾಸಿ ಯೂಸುಫ್ ಸಿ.ಇ (28) ಎಂದು ತಿಳಿದುಬಂದಿದೆ.
ಸಂದೇಹದ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2026, ಕಲಂ 27(b) ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!