
ಉಪ್ಪಿನಂಗಡಿ: ಮಾ. 28ರಂದು ನಡೆಯಲಿರುವ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳೋತ್ಸವದ ಪೂರ್ವ ಸಿದ್ಧತಾ ಪರಿಶೀಲನಾ ಸಭೆ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಅಧ್ಯಕ್ಷತೆಯಲ್ಲಿ ಹಳೆಗೇಟು ನೇತ್ರಾವತಿ ನದಿ ಕಿನಾರೆಯ ಕಂಬಳ ಕರೆಯ ಬಳಿ ನಡೆಯಿತು.
ಕರೆಯ ಸಿದ್ಧತೆ, ವೇದಿಕೆ ನಿರ್ಮಾಣ, ವೀಕ್ಷಕರ ಆಸನ ವ್ಯವಸ್ಥೆ, ಸ್ವಚ್ಛತಾ ಕ್ರಮಗಳು ಹಾಗೂ ಕೋಣಗಳಿಗೆ ಮಾಡಲಾಗಿರುವ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದು ಮಾತನಾಡಿದ ಶಾಸಕ ರೈ, ಉಪ್ಪಿನಂಗಡಿ ಕಂಬಳೋತ್ಸವ ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದು, ಪ್ರತಿ ವರ್ಷ ವಿಭಿನ್ನ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯುತ್ತಿದೆ ಎಂದು ಹೇಳಿದರು. ಇಲ್ಲಿನ ಕಂಬಳೋತ್ಸವವು ರಾಜ್ಯಕ್ಕೆ ಮಾದರಿಯಾಗಿದ್ದು, ಮುಖ್ಯಮಂತ್ರಿಯಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.
ಈ ಬಾರಿಯೂ ಯಾವುದೇ ಲೋಪವಾಗದಂತೆ ಸಮಗ್ರ ಸಿದ್ಧತೆಗಳನ್ನು ಕೈಗೊಂಡು, ಸಮಿತಿಯವರ ಒಗ್ಗಟ್ಟಿನ ಸಹಕಾರದೊಂದಿಗೆ ಕಂಬಳೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿಟ್ಟು, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಗೋಳ್ತಮಜಲು, ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗೈ, ಉಪಾಧ್ಯಕ್ಷರಾದ ವಿಠಲ ಶೆಟ್ಟಿ ಕೊಲ್ಲೊಟ್ಟು, ವಾರಿಸೇನ ಜೈನ್ ಕೋಡಿಯಾಡಿಗುತ್ತು, ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಎಸ್. ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ವಿಜಯ ಪೂಜಾರಿ ಚೀಮುಳ್ಳು, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು, ಕುಮಾರನಾಥ ಪಲ್ಲತ್ತಾರು, ಸ್ವಾಗತ ಸಮಿತಿಯ ವಿಕ್ರಂ ಶೆಟ್ಟಿ ಅಂತರ, ಕೃಷ್ಣ ನಾಯ್ಕ, ನೀರಾವರಿ ಸಮಿತಿಯ ಜಗದೀಶ್ ಕುಮಾರ್ ಪರಕಜೆ, ಫಾರೂಕ್ ಪೆರ್ನೆ, ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.














