ಸರ್ಕಾರದಿಂದ ಅನುಮತಿ ಪಡೆದರೂ ನಿರ್ದಿಷ್ಟ ಮಾರ್ಗದಲ್ಲಿ ಸಂಚರಿಸದ ಖಾಸಗಿ ಬಸ್ ಗಳ ಪರ್ಮಿಟ್ ರದ್ದುಪಡಿಸಲು ಆರ್.ಟಿ.ಒ. ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 409 ಬಸ್ ಗಳು ಸಂಚರಿಸುತ್ತಿವೆ. ಅದರಲ್ಲಿ 364 ಖಾಸಗಿ, 45 ಸರ್ಕಾರಿ ಬಸ್ ಗಳಿವೆ. ಯಾವುದೇ ಖಾಸಗಿ ಬಸ್ ಗಳು ಅನುಮತಿ ಪಡೆದ ಮಾರ್ಗದಲ್ಲಿ ಸಂಚರಿಸದಿದ್ದರೆ ಅವುಗಳ ಪರ್ಮಿಟ್ ರದ್ದು ಪಡಿಸಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಅದೇ ರೀತಿ ಯಾವುದೇ ಮಾರ್ಗದಲ್ಲಿ ಸರ್ಕಾರಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದರೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!