ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಹಾಗೂ ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ವಾದ–ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸರಿತಾ ಡಿ. ಅವರು ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದರು.
ನ್ಯಾಯಾಲಯ ವಿಧಿಸಿದ ಷರತ್ತುಗಳ ಪ್ರಕಾರ, ಇಬ್ಬರೂ ತಲಾ ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಹಾಗೂ ಸಾಕ್ಷ್ಯನಾಶಕ್ಕೆ ಯತ್ನಿಸಬಾರದು. ವಿಚಾರಣೆಯ ಎಲ್ಲಾ ದಿನಾಂಕಗಳಲ್ಲಿ ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!