ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‍ನ ಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ.
ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್‍ಗೆ ಸವಾಲು ಎಸೆದಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದಿದ್ದಾರೆ.
ಕಾಂಗ್ರೆಸ್ ಮುಖಂಡರು ನಮ್ಮ ಅಹಿಂದ ಸಮುದಾಯಕ್ಕೆ ಟಿಕೆಟ್ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಇದೇ ವೇಳೆ ಆಕ್ರೋಶ ಹೊರಹಾಕಿದ್ದಾರೆ.
ಸಮರ್ಥ್ ಶಾಮನೂರು ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್ ನಾಯಕರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.














