ಪುತ್ತೂರು, ಮಾ.24: ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಕಾರ್ಯಕ್ರಮವು ಮಾ.26ರಂದು ನೆರವೇರಲಿದೆ. ಇದೇ ದಿನ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕವೂ ನಡೆಯಲಿದೆ.
ಮೃತ್ಯುಂಜಯ ಹೋಮ ಸೇವೆ ಸಲ್ಲಿಸಲು ಇಚ್ಛಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆದು ಹೆಸರು ನೋಂದಾಯಿಸಿಕೊಳ್ಳಬೇಕು. ಹಾಗೆಯೇ ಶುದ್ಧ ಎಳ್ಳೆಣ್ಣೆ ಅಭಿಷೇಕ ಸಮರ್ಪಿಸಲು ಬಯಸುವವರು ಸಹ ಸೇವಾ ರಶೀದಿ ಪಡೆಯುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














