ಮಂಗಳೂರು, ಮಾ.25: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಅರಬಿ ಸಮುದ್ರ ಪ್ರದೇಶದಲ್ಲಿ ಗಾಳಿಯ ಒತ್ತಡ ಹೆಚ್ಚಿರುವ ಪರಿಣಾಮ ಕರಾವಳಿ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಗಾಳಿ ಮತ್ತು ಸಿಡಿಲಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ.
ಇದರ ಮಧ್ಯೆ, ಮಂಗಳವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 33.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆಗಿಂತ 0.4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಕನಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಆಗಿತ್ತು.
ಮಾ.24ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಹಾಗೂ ಉಡುಪಿ ಜಿಲ್ಲೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!