ಮಂಗಳೂರು: ಮಂಗಳೂರು ನಗರದಲ್ಲಿ 2025ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025ರಂತೆ ಬಿ.ಎನ್.ಎಸ್. 2023ರ ಕಲಂ 353(1), 353(2), 61(2), 55ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ತನಿಖೆ ವೇಳೆ ‘TN-MADDY’ ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್‌ಗಳನ್ನು ಹಾಕಿರುವುದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22), ತಂದೆ ಬಾಲಕೃಷ್ಣ ಎಂಬುದು ಬೆಳಕಿಗೆ ಬಂದಿದೆ.
ಆರೋಪಿಯನ್ನು ಮಂಗಳವಾರ (ಮಾ.25, 2026) ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದಲ್ಲದೆ, ಇದೇ ಆರೋಪಿತನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್‌ಗಳ ಕುರಿತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ. 95/2025ರಂತೆ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅದರ ತನಿಖೆಯೂ ನಡೆಯುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!