ಚಿಕ್ಕಮಗಳೂರು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆಯ ಹೆಚ್. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಉಷಾ (45) ಮೃತರು. ಕಿರುಕುಳ ತಡೆಯಲು ಆಗುತ್ತಿಲ್ಲ ಎಂದು ಹೇಳಿ ವಿಡಿಯೋ ದಾಖಲಿಸಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರುವುದು ತನ್ನ ತಪ್ಪು ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಮೃತೆಯ ಪತಿ ನೀಡಿದ ದೂರಿನ ಆಧಾರದಲ್ಲಿ ಹೆಚ್. ಮಲ್ಲೇನಹಳ್ಳಿ ಗ್ರಾಮದ 10 ಜನರ ವಿರುದ್ಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!