ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ನಡೆದಿದೆ.
ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಮೃತಪಟ್ಟ ದಂಪತಿಗಳಾಗಿದ್ದಾರೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ದಂಪತಿಯ ನಡುವೆ ಹಲವು ಬಾರಿ ಕಲಹಗಳು ನಡೆದಿದ್ದವು. ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರವೂ ಇಬ್ಬರ ನಡುವೆ ಜಗಳ ನಡೆದಿದ್ದು, ಬಳಿಕ ಪತ್ನಿ ಮನೆಗೆ ಹೊರಗಿದ್ದ ವೇಳೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮನೆಗೆ ಮರಳಿದ ಪತ್ನಿ ಗಂಡನ ಮೃತದೇಹವನ್ನು ಕಂಡು ಅಪಾರ್ಟ್‌ಮೆಂಟ್‌ನ ಮೇಲಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!