ಪುತ್ತೂರು, ಏ.1: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಗೊನೆ ಮುಹೂರ್ತ ನೆರವೇರಿತು.
ಬೆಳಿಗ್ಗೆ 9.15ಕ್ಕೆ ವೃಷಭ ಲಗ್ನದಲ್ಲಿ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭ ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ಜಾತ್ರೋತ್ಸವಕ್ಕೆ ಏ.10ರಂದು ಧ್ವಜಾರೋಹಣದ ಮೂಲಕ ಅಧಿಕೃತ ಚಾಲನೆ ದೊರೆಯಲಿದೆ. ಜಾತ್ರೆಯ ಅಂಗವಾಗಿ ಪ್ರತಿದಿನ ಸಂಜೆ ಉತ್ಸವ, ಪೇಟೆ ಸವಾರಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಸಮಿತಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!