ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ಬಾರ್‌ ಎಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದ ಗಲಾಟೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಕ್ಕಡ ಗ್ರಾಮದ ಅಕ್ಷಯ್‌ (31) ಅವರ ದೂರಿನಂತೆ, ಮಾರ್ಚ್‌ 29, 2026ರಂದು ರಾತ್ರಿ ಅವರು ಕೊಕ್ಕಡದ ಬಾರ್‌ ಎಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ ಯತೀಶ್‌ ಎಂಬಾತ ಹಣಕಾಸು ವಿಚಾರವಾಗಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಇದಲ್ಲದೆ, ಯತೀಶ್‌ ಜೊತೆ ಧನುಷ್‌ ಭಂಡಾರಿ, ಶರತ್‌ ಭಂಡಾರಿ ಹಾಗೂ ಪ್ರವೀಣ್‌ ಕೂಡ ಸೇರಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 23/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಕಲಂ 352, 115(2), 118(1), 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!