ಉಳ್ಳಾಲ :ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಎಂಬಾತನನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಖಚಿತ ಮಾಹಿತಿ ಪಡೆದುಕೊಂಡ ಕೊಣಾಜೆ ಎಸ್ ಐ ನಾಗರಾಜ್‌ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!