ಕಡಬ, ಏ.4: ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿಯಂತೆ, ಫಿರ್ಯಾದುದಾರರಾದ ಸಂತ್ರಸ್ತ ಮಹಿಳೆ ಕಳೆದ ಸುಮಾರು ಮೂರು ವರ್ಷಗಳಿಂದ ಪತಿಯೊಂದಿಗೆ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದಾರೆ. ಈ ಅವಧಿಯಲ್ಲಿ ಆರೋಪಿಯಾಗಿರುವ ಪ್ರಭಾಕರ ಪಿ. ಅವರೊಂದಿಗೆ ಪರಿಚಯ ಬೆಳೆದು ಅನ್ಯೂನ್ಯತೆಯೂ ಉಂಟಾಗಿತ್ತು ಎನ್ನಲಾಗಿದೆ.
ಏ.3ರಂದು ಫಿರ್ಯಾದುದಾರರು ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ, ಆರೋಪಿ ಹಲ್ಲೆ ನಡೆಸಿ ಆವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 37/2026ರಂತೆ ಬಿಎನ್‌ಎಸ್–2023ರ ಕಲಂ 115(2), 352, 74, 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!