ಬಂಟ್ವಾಳ: 2020ನೇ ಸಾಲಿನಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಮಾರಾಟ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.70,000 ದಂಡ ವಿಧಿಸಿ ತೀರ್ಪು ನೀಡಿದೆ.
ದಿನಾಂಕ 10.11.2020ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ರೂ.49,000 ಮೌಲ್ಯದ 1.480 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 126/2020ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ಪೂರ್ಣಗೊಳಿಸಿ, ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು 04-04-2026ರಂದು ತೀರ್ಪು ಪ್ರಕಟಿಸಿ, ಆರೋಪಿತ ಮಂಗಳೂರು ಬಂದರು ನಿವಾಸಿ ಟಿ.ಪಿ. ಫಾರೂಕ್ (50) ಅವರಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.70,000 ದಂಡ ವಿಧಿಸಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಶ್ರೀಮತಿ ಜೂಡಿತಾ ಅವರು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!