ಸುಳ್ಯ: ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಾರ್ಚ್ 30, 2026ರಂದು ನಡೆದ ಘಟನೆ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 45/2026 ಕಲಂ 303(2) ಬಿಎನ್‌ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಏಪ್ರಿಲ್ 6ರಂದು ಸುಳ್ಯ ತಾಲೂಕಿನ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ. ಆರೋಪಿತನಿಂದ ಕಳವು ಮಾಡಿದ್ದ ₹2,000 ನಗದು ಹಣವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.














